baa

Msn Group
9/29/2025Aria v1
ಬಾಳುವಂತ ಹೂವೆ ಬಾಡುವಾಸೆ ಏಕೆ? ಬಾಳುವಂತ ಹೂವೆ ಬಾಡುವಾಸೆ ಏಕೆ? ಹಾಡುವಂತ ಕೋಗಿಲೆ ಅಳುವ ಆಸೆ ಏಕೆ? ಕವಲುದಾರಿಯಲ್ಲಿ ಬಾಳು ಸಾಧ್ಯವೆ? ಅವಳಿ ದೊಣಿ ಮೇಲೆ ಯಾನ ಯೋಗ್ಯವೇ? ಬಾಳುವಂತ ಹೂವೆ ಬಾಡುವಾಸೆ ಏಕೆ? ಹಾಡುವಂತ ಕೋಗಿಲೆ ಅಳುವ ಆಸೆ ಏಕೆ? [verse 2] ಯಾರಿಗಿಲ್ಲ ನೋವು? ಯಾರಿಗಿಲ್ಲ ಸಾವು? ವ್ಯರ್ಥ ವ್ಯಸನದಿಂದ ಸಿಹಿಯು ಕೂಡ ಬೇವು ಬಾಳು ಒಂದು ಸಂತೆ, ಸಂತೆ ತುಂಬ ಚಿಂತೆ ಮದ್ಯ-ಮನಗಳಿಂದ ಚಿಂತೆ ಬೆಳೆವುದಂತೆ ಅಂಕೆ ಇರದ ಮನಸನು ಡಂಡಿಸುವುದು ನ್ಯಾಯ ಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯ ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೆರಲು? ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು? ಬಾಳುವಂತ ಹೂವೆ ಬಾಡುವಾಸೆ ಏಕೆ? ಹಾಡುವಂತ ಕೋಗಿಲೆ ಅಳುವ ಆಸೆ ಏಕೆ? [verse 3] ಬಾಳ ಕದನದಲ್ಲಿ ಭರವಸೆಗಳು ಬೇಕು ನಾಳೆ ನನ್ನದೆನ್ನುವ ನಂಬಿಕೆಗಳು ಬೇಕು ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ ನಾವೆ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ ಇಲ್ಲಿ ಈಸಬೇಕು, ಇದ್ದು ಜಯಿಸಬೇಕು ನಾಗರಿಕರಾದಮೇಲೆ ಸುಗುಣರಾಗಬೇಕು ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ? ಮನದ ಡೊಂಕು ಕಾಣದೆ ಜಗವನೇಕೆ ನೀ ದೂರುವೆ? ಬಾಳುವಂತ ಹೂವೆ ಬಾಡುವಾಸೆ ಏಕೆ? ಹಾಡುವಂತ ಕೋಗಿಲೆ ಅಳುವ ಆಸೆ ಏಕೆ? ಕವಲು ದಾರಿಯಲ್ಲಿ ಬಾಳು ಸಾಧ್ಯವೆ? ಅವಳಿ ದೊಣಿ ಮೇಲೆ ಯಾನ ಯೋಗ್ಯವೇ? ಬಾಳುವಂತ ಹೂವೆ ಬಾಡುವಾಸೆ ಏಕೆ? ಹಾಡುವಂತ ಕೋಗಿಲೆ ಅಳುವ ಆಸೆ ಏಕೆ?